ಧಾರವಾಡ : ಕರ್ನಾಟಕದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಆಗಿದೆ. ಧಾರವಾಡ ಲೋಕ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಅಸೂಟಿಗೆ ಟಿಕೆಟ್ ನೀಡಲಾಗಿದೆ.ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಸುದ್ದಿಗೋಷ್ಟಿ ನಡೆಸಿ, ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದಾರೆ.
ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಕೆಸಿ ವೇಣುಗೋಪಾಲ್, ಅಂಬಿಕಾ ಸೋನಿ, ಸಲ್ಮಾನ್ ಖುರ್ಷಿದ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು. ಸುದೀರ್ಘ ಚರ್ಚೆಗಳ ಬಳಿಕ ಅಭ್ಯರ್ಥಿಗಳ ಹೆಸರು ಪ್ರಕಟಗೊಂಡಿದೆ.