ಹುಬ್ಬಳ್ಳಿ: ಹುಬ್ಬಳ್ಳಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಬರುವ ಬ್ಯಾಹಟ್ಟಿ ಗ್ರಾಮದಲ್ಲಿ ಗುಂಪು ಕಟ್ಟಿಕೊಂಡು ಇಸ್ಪೀಟ್ ಆಡುತ್ತಿದ್ದ ಆರು ಜನ ಆರೋಪಿಗಳನ್ನ ಬಂಧನ ಮಾಡುವಲ್ಲಿ ಗ್ರಾಮೀಣ ಪೊಲೀಸ್ ಠಾಣಾ ಪೊಲೀಸರು ಯಶಸ್ವಿ ಆಗಿದ್ದಾರೆ..
ಖಚಿತ ಮಾಹಿತಿ ಮೇರೆಗೆ ಗ್ರಾಮೀಣ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮುರಗೇಶ ಚನ್ನಣ್ಣವರ ಹಾಗೂ PSI ಬೆಳಗಾಂವಕರ್ ನೇತೃತ್ವದ ತಂಡ ದಾಳಿ ನಡೆಸಿ ಆರು ಜನ ಆರೋಪಿಗಳನ್ನ ಬಂಧನ ಮಾಡಿ ಅವರಿಂದ 15000/- ನಗದು ಹಣ ಹಾಗೂ ಒಂದು ಬೈಕ್ ಜಪ್ತಿ ಮಾಡಿದ್ದಾರೆ. ಈ ಕುರಿತಂತೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ