ರಾಯಚೂರು (Raichur) ಜಿಲ್ಲೆಯ ಮಾನ್ವಿ ತಾಲೂಕಿನ ನಂದಿಹಾಳ ಬಳಿ ಹಳ್ಳದ ಸೇತುವೆ ತಡೆಗೋಡೆಗೆ ಸರ್ಕಾರಿ ಬಸ್(Bus) ಡಿಕ್ಕಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾದ ಘಟನೆ ನಡೆದಿದೆ. ಕೂಡಲೇ ಗಾಯಾಳುಗಳಿಗೆ ಮಾನ್ವಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಯಚೂರು, ಸೇತುವೆ ತಡೆಗೋಡೆಗೆ ಬಸ್ ಡಿಕ್ಕಿ
ರಾಯಚೂರು, ಆ.04: ಹಳ್ಳದ ಸೇತುವೆ ತಡೆಗೋಡೆಗೆ ಬಸ್(Bus) ಡಿಕ್ಕಿಯಾಗಿ ಹಲವರಿಗೆ ಗಾಯವಾದ ಘಟನೆ ರಾಯಚೂರು (Raichur) ಜಿಲ್ಲೆಯ ಮಾನ್ವಿ ತಾಲೂಕಿನ ನಂದಿಹಾಳ್ ಬಳಿ ನಡೆದಿದೆ. ಮಾನ್ವಿ- ಸಿಂಧನೂರು ಮಾರ್ಗದ ಬಸ್ ಇದಾಗಿದ್ದು, ಸ್ಟೇರಿಂಗ್ ರಾಡ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದ್ದು, ಸೇತುವೆ ತಡೆಗೋಡೆಗೆ ಡಿಕ್ಕಿಯಾಗಿ ಹಳ್ಳಕ್ಕೆ ಇಳಿದಿದೆ. ಇನ್ನು ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದೆ.ಕೂಡಲೇ ಗಾಯಾಳುಗಳಿಗೆ ಮಾನ್ವಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.