ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಯುವತಿ ಆ*ತ್ಮಹ*ತ್ಯೆ.. ಸೋನಿಯಾ(24) ಮೃತ ಯುವತಿ..!
ಹೌದು ಸೋಮವಾರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.. ಬೆಂಗಳೂರಿನ ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದ 24 ವರ್ಷದ ಸೋನಿಯಾ ಒಂದೂವರೆ ತಿಂಗಳ ಹಿಂದೆ ಬೆಂಗಳೂರಿಗೆ ಬಂದಿದ್ದಳು. ಸೋಮವಾರ ರಾತ್ರಿ ಒಂದು ಗಂಟೆಗೂ ಹೆಚ್ಚು ಕಾಲ ತನ್ನ ತಾಯಿಯ ಜೊತೆ ಮಾತನಾಡಿದ್ದ ಸೋನಿಯಾ, ಮಾತುಕತೆ ಬಳಿಕ ನೇಣು ಬಿಗಿದುಕೊಂಡಿರುವ ಶಂಕೆ ವ್ಯಕ್ತವಾಗಿದೆ.. ಬೆಳಗ್ಗೆ ಎಂದಿನಂತೆ ಸ್ಪಾಗೆ ಬರಲಿಲ್ಲ ಎಂದು ಕರೆ ಮಾಡಿದ್ದ ಸ್ಪಾ ಮಾಲೀಕ.. ಕರೆ ಸ್ವೀಕರಿಸಿದಿದ್ದಾಗ ಅನುಮಾನಗೊಂಡು ಮನೆ ಬಳಿ ಬಂದು ನೋಡಿದ್ದಾನೆ.. ಮನೆ ಬಾಗಿಲು ತೆರೆಯದಿದ್ದಾಗ ಪೊಲೀಸರಿಗೆ ಮಾಹಿತಿ ನೀಡಿದ್ದ ಸ್ಪಾ ಮಾಲೀಕ.. ಪೊಲೀಸರು ಸ್ಥಳಕ್ಕೆ ಬಂದು ಬಾಗಿಲು ಮುರಿದು ನೋಡಿದಾಗ ಆ*ತ್ಮಹ*ತ್ಯೆಗೆ ಶರಣಾಗಿರುವುದು ಬೆಳಕಿಗೆ.. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..!