Monday, December 23, 2024
spot_img
Homeನ್ಯೂಸ್ರಾಜ್ಯ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ ನಿಲಯ್ ವಿಪಿನ್​ಚಂದ್ರ ಅಂಜಾರಿಯ

ರಾಜ್ಯ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ ನಿಲಯ್ ವಿಪಿನ್​ಚಂದ್ರ ಅಂಜಾರಿಯ

ಬೆಂಗಳೂರು: ನ್ಯಾಯಮೂರ್ತಿ ನಿಲಯ್ ವಿಪಿನ್ ಚಂದ್ರ ಅಂಜಾರಿಯ ಅವರು ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ರಾಜಭವನದ ಗ್ಲಾಸ್​ ಹೌಸ್​ನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಮುಖ್ಯ ನ್ಯಾಯಮೂರ್ತಿಗಳಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.

ನೂತನ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಪರಿಷತ್ ಸದಸ್ಯ ಕೆ.ಗೋವಿಂದರಾಜ್, ಮಾಜಿ ಕೇಂದ್ರ ಸಚಿವ ಡಾ.ಎಂ ವೀರಪ್ಪ ಮೊಯಿಲಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಡಾ.ಶಾಲಿನಿ ರಜನೀಶ್, ಉಚ್ಚ ನ್ಯಾಯಾಲಯದ ವಕೀಲರು, ಗಣ್ಯರು ಸೇರಿದಂತೆ ಇತರೆ ಅಧಿಕಾರಿಗಳು ಭಾಗಿಯಾಗಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -spot_img

Most Popular

Recent Comments