Wednesday, December 18, 2024
spot_img
Homeವಿಶೇಷ ಸುದ್ದಿಗಳುಶ್ರೀಕೃಷ್ಣನ ದ್ವಾರಕೆಯನ್ನು ಕಣ್ತುಂಬಿಕೊಳ್ಳಲು ನವಿಲುಗರಿಗಳ ಹಿಡಿದು ಸಮುದ್ರದಾಳಕ್ಕೆ ಹಾರಿದ ಪ್ರಧಾನಿ ಮೋದಿ

ಶ್ರೀಕೃಷ್ಣನ ದ್ವಾರಕೆಯನ್ನು ಕಣ್ತುಂಬಿಕೊಳ್ಳಲು ನವಿಲುಗರಿಗಳ ಹಿಡಿದು ಸಮುದ್ರದಾಳಕ್ಕೆ ಹಾರಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ(Narendra Modi) ಕೃಷ್ಣನ ದ್ವಾರಕೆ(Dwarka)ಯನ್ನು ಕಣ್ತುಂಬಿಕೊಳ್ಳಲು ನವಿಲುಗರಿಗಳ ಹಿಡಿದು ಸಮುದ್ರದಾಳಕ್ಕೆ ಹಾರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಪ್ರವಾಸದ ಎರಡನೇ ದಿನಕ್ಕೆ ಕಾಲಿಟ್ಟಿದ್ದಾರೆ. ಇಂದು ಸ್ಕೂಬಾ ಡೈವಿಂಗ್ ಮೂಲಕ ದ್ವಾರಕೆಗೆ ತೆರಳಿದ್ದಾರೆ, ಮುಳುಗಡೆಯಾಗಿರುವ ದ್ವಾರಕಾನಗರಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಶ್ರೀಕೃಷ್ಣ ದ್ವಾರಕೆಯ ರಾಜನಾಗಿದ್ದ, ಪ್ರಧಾನಿ ಮೋದಿ ನಗರದ ಭವ್ಯತೆ ಹಾಗೂ ಸಮೃದ್ಧಿಯನ್ನು ನೆನಪಿಸಿಕೊಂಡು ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ, ಅವರು ದ್ವಾರಕಾದಲ್ಲಿ ಸುದರ್ಶನ ಸೇತುವನ್ನು ಉದ್ಘಾಟಿಸಿದರು, ಇದು ದೇಶದ ಅತಿ ಉದ್ದದ ಕೇಬಲ್ ಬೆಂಬಲಿತ ಸೇತುವೆಯಾಗಿದೆ.

6 ವರ್ಷಗಳ ಹಿಂದೆ ಈ ಸೇತುವೆಯ ಶಂಕುಸ್ಥಾಪನೆ ಮಾಡಲು ನನಗೆ ಅವಕಾಶ ಸಿಕ್ಕಿತ್ತು ಎಂದು ಪ್ರಧಾನಿ ಹೇಳಿದರು. ಈ ಸೇತುವೆಯು ಓಖಾವನ್ನು ಬೆಟ್ ದ್ವಾರಕಾ ದ್ವೀಪಕ್ಕೆ ಸಂಪರ್ಕಿಸುತ್ತದೆ. ಈ ಸೇತುವೆಯು ದ್ವಾರಕಾಧೀಶನ ದರ್ಶನವನ್ನು ಸುಲಭಗೊಳಿಸುತ್ತದೆ ಮತ್ತು ಈ ಸ್ಥಳದ ದೈವಿಕತೆಯನ್ನು ಹೆಚ್ಚಿಸುತ್ತದೆ. ಈ ವೇಳೆ ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧವೂ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಕಾಲದಲ್ಲಿ ಆಗುತ್ತಿದ್ದ ಹಗರಣಗಳನ್ನು ತಡೆದಿದ್ದೇವೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -spot_img

Most Popular

Recent Comments