ಉತ್ತರ ಪ್ರದೇಶ(Uttar Pradesh)ದ ಕೌಶಂಬಿಯಲ್ಲಿರುವ ಪಟಾಕಿ ಕಾರ್ಖಾನೆ(Firecracker Factory) ಯಲ್ಲಿ ಭಾನುವಾರ ಸ್ಫೋಟ ಸಂಭವಿಸಿದೆ. ಜಿಲ್ಲೆಯ ಕೊಖ್ರಾಜ್ ಪೊಲೀಸ್ ಠಾಣೆ ವ್ಯಾಪ್ತಿಯ ಭಾರ್ವಾರಿ ಪಟ್ಟಣದ ಶರಾಫತ್ ಅಲಿಯಲ್ಲಿ ಈ ಘಟನೆ ನಡೆದಿದೆ. ಸ್ಥಳೀಯರಿಂದ ಬಂದ ಮಾಹಿತಿ ಪ್ರಕಾರ ಇಲ್ಲಿ ಮದುವೆಗೆ ಪಟಾಕಿ ತಯಾರಿಸಲಾಗುತ್ತಿತ್ತು. ಈ ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಎಸ್ಪಿ ಮತ್ತು ಅನೇಕ ಪೊಲೀಸ್ ಠಾಣೆಗಳ ಪೊಲೀಸರು ಅಲ್ಲಿಗೆ ತಲುಪಿದ್ದಾರೆ.
ಎಸ್ಪಿ ಬ್ರಿಜೇಶ್ ಶ್ರೀವಾಸ್ತವ ಸೇರಿದಂತೆ ಹಲವು ಪೊಲೀಸ್ ಠಾಣೆಗಳ ಪಡೆಗಳು ಘಟನಾ ಸ್ಥಳದಲ್ಲಿದ್ದಾರೆ. ಈ ಘಟನೆ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ಕೂಡ ಮಾಹಿತಿ ಪಡೆದಿದ್ದಾರೆ. ಈ ಘಟನೆ ಕುರಿತು ಮುಖ್ಯಮಂತ್ರಿಗಳಿಗೆ ವಿವರವಾದ ಮಾಹಿತಿ ನೀಡಲಾಗಿದೆ. ಮೃತರ ಕುಟುಂಬಕ್ಕೆ ಸಿಎಂ ಯೋಗಿ ಸಂತಾಪ ಸೂಚಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯ ಚುರುಕುಗೊಳಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಗಾಯಾಳುಗಳು ಆಸ್ಪತ್ರೆಗೆ ದಾಖಲು ಈ ಘಟನೆಯಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಗೆ ಎಸ್ಪಿ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಸ್ಥಳೀಯ ಜನರ ಪ್ರಕಾರ, ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟವು ಎಷ್ಟು ಭೀಕರವಾಗಿದೆ ಎಂದರೆ ಪಟಾಕಿಗಳ ತುಂಡುಗಳು ಹಲವಾರು ಕಿಲೋಮೀಟರ್ ದೂರ ಹಾರಿಹೋಗಿವೆ. ಘಟನೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಎಸ್ಪಿ ಬ್ರಿಜೇಶ್ ಕುಮಾರ್ ಶ್ರೀವಾಸ್ತವ ಮಾತನಾಡಿ, ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಘಾತದಲ್ಲಿ 5 ಜನರು ಸಾವನ್ನಪ್ಪಿದ್ದಾರೆ, ಕೆಲವರು ಗಾಯಗೊಂಡಿದ್ದಾರೆ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಮತ್ತಷ್ಟು ಓದಿ: West Bengal: ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆ ಸ್ಫೋಟ, ಸಾವಿನ ಸಂಖ್ಯೆ 9ಕ್ಕೆ ಏರಿಕೆ
ಈ ಘಟನೆಯಲ್ಲಿ ಇನ್ನೂ ಹಲವು ಮಂದಿ ಸಿಲುಕಿದ್ದು, ರಕ್ಷಿಸಲಾಗುತ್ತಿದೆ. ಪೊಲೀಸರು ಮತ್ತು ಸ್ಥಳೀಯ ರಕ್ಷಕರು ಕಾರ್ಯಾಚರಣೆಯಲ್ಲಿ ಸಹಾಯ ಮಾಡುತ್ತಿದ್ದಾರೆ. ಈ ಕಾರ್ಖಾನೆಯು ಪ್ರಯಾಗರಾಜ್ ಕಾನ್ಪುರ ಹೆದ್ದಾರಿಯ ಸಮೀಪದಲ್ಲಿದೆ. ಈ ಸ್ಫೋಟದ ಸದ್ದು ದೂರಕ್ಕೆ ಕೇಳಿಸಿತ್ತು ಎಂದು ಸ್ಥಳೀಯರು ಹೇಳುತ್ತಾರೆ. ಘಟನೆಯಿಂದ ಸಿಟ್ಟಿಗೆದ್ದ ಜನರು ಅಲ್ಲಿನ ಆಡಳಿತದ ವಿರುದ್ಧವೂ ಪ್ರತಿಭಟನೆ ನಡೆಸಿದ್ದಾರೆ. ಈ ಕಾರ್ಖಾನೆಯು ಕೌಶಲ್ ಅಲಿ ಎಂಬ ವ್ಯಕ್ತಿಯ ಒಡೆತನದಲ್ಲಿದೆ ಎಂದು ಹೇಳಲಾಗುತ್ತದೆ.