Monday, December 23, 2024
spot_img
Homeರಾಜಕೀಯನಮ್ಮ ಧರ್ಮ ಸಂಸ್ಕೃತಿ ಪರಂಪರೆಯನ್ನು ಉಳಿಸುವ ಕೆಲಸವನ್ನು ಮೋದಿ ಮಾಡ್ತಿದ್ದಾರೆ-ಮಾಜಿ ಸಿಎಂ ಜಗದೀಶ ಶೆಟ್ಟರ್

ನಮ್ಮ ಧರ್ಮ ಸಂಸ್ಕೃತಿ ಪರಂಪರೆಯನ್ನು ಉಳಿಸುವ ಕೆಲಸವನ್ನು ಮೋದಿ ಮಾಡ್ತಿದ್ದಾರೆ-ಮಾಜಿ ಸಿಎಂ ಜಗದೀಶ ಶೆಟ್ಟರ್

 

ಹುಬ್ಬಳ್ಳಿ; ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಹಾಗೂ ಜೈಶಂಕರ್ ಅವರು ಲೋಕ ಸಭೆಗೆ ಸ್ಪರ್ಧಿಸುವ ಸಾಧ್ಯತೆಗಳಿದ್ದು, ಕರ್ನಾಟಕದಿಂದಲ್ಲೇ ಸ್ಪರ್ಧೆ ಸ್ಪರ್ಧಿಸುತ್ತಾರೆಂಬುದು ಹೇಳೋಕೆ ಆಗೋಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು‌

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರು ಸದ್ಯ ರಾಜ್ಯಸಭೆ ಸದಸ್ಯರು ಅಲ್ಲ. ಹೀಗಾಗಿ ಅವರು ಲೋಕಸಭೆಗೆ ಸ್ಪರ್ಧೆ ಮಾಡಬಹುದು. ಈ ನಿಟ್ಟಿನಲ್ಲಿ ಅವರು ಕರ್ನಾಟಕ ಹೊರತುಪಡಿಸಿ ಬೇರೆ ರಾಜ್ಯದಿಂದಲೂ ಕೂಡಾ ಸ್ಪರ್ಧೆ ಮಾಡುತ್ತಾರೆ ಅಂತಾ ಹೇಳೋಕೆ ಆಗೋಲ್ಲ. ಅವರು ಬೇರೆ ರಾಜ್ಯದಿಂದಲ್ಲೂ ಸ್ಪರ್ಧೆ ಮಾಡಬಹುದು ಎಂದರು.

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ವಿಚಾರಕ್ಕೆ ‌ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಚುನಾವಣಾ ಫಲಿತಾಂಶದ ನಂತರ ಅದು ಗೊತ್ತಾಗುತ್ತೆ, ಯಾರು ಅಡ್ಡ ಮತದಾನ ಮಾಡಿದ್ದಾರೆ ಎಂಬುದು ತಿಳಿಯುತ್ತೆ ಆದ್ದರಿಂದ ಫಲಿತಾಂಶ ಬರೋವರೆಗೂ ಏನೂ ಹೇಳೋಕೆ ಆಗೋಲ್ಲ. ಕುದುರೆ ವ್ಯಾಪರವೋ ಏನೋ ನನಗೆ ಗೊತ್ತಿಲ್ಲ ಎಂದರು.

ಸಮುದ್ರ ಆಳದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನವಿಲುಗರಿ ನೆಟ್ಟರೆ ಚಿಗಿರುತ್ತಾ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಟೀಕೆಗೆ ಅರ್ಥವೇ ಇಲ್ಲ. ನಮ್ಮ ಧರ್ಮ, ಸಂಸ್ಕೃತಿ, ಪರಂಪರೆಯನ್ನು ಉಳಿಸುವ ಕೆಲಸವನ್ನು ಮೋದಿ ಮಾಡುತ್ತಿದ್ದಾರೆ. ಇಡೀ ದೇಶ ಆರಾಧನೆ ಮಾಡುವ ಪವಿತ್ರ ಸ್ಥಳಗಳನ್ನು ಅಭಿವೃದ್ಧಿ ಮಾಡುತ್ತಿದ್ದಾರೆ ಎಂದರು.

ಕಳಸಾ-ಬಂಡೂರಿ ಯೋಜನೆ ವಿಳಂಬ ವಿಚಾರ:

ಕಳಸಾ-ಬಂಡೂರಿ ಯೋಜನೆ ವಿಳಂಬಕ್ಕೆ ಸಂಬಂದಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಮನೋಹರ್ ಪರಿಕರ ಸಿಎಂ ಇದ್ದಾಗ ಯೋಜನೆ ಅನುಷ್ಠಾನಕ್ಕೆ ಪ್ರಯತ್ನಿಸುತ್ತಿದೆ. ಮನೋಹರ ಪರಿಕರ್ ಮನವೊಲಿಕೆ ಸಹ ಆಗಿತ್ತು. ಆದರೇ ಆ ವೇಳೆ ಗೋವಾ ಕಾಂಗ್ರೆಸ್ ನವರೇ ವಿರೋಧ ಮಾಡಿದ್ದರು ಎಂದು ಗಂಭೀರವಾಗಿ ಆರೋಪಿಸಿದರು.

ಗೋವಾ ವಿದ್ಯುತ್ ಯೋಜನೆಗೆ ಅರಣ್ಯ ನಾಶ ಎಂಬ ವಿಚಾರದ ಕುರಿತು ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಇದೇ ವಿಚಾರವಾಗಿ ನಾವು ಹೋರಾಡಬೇಕಾಗುತ್ತದೆ. ವಿದ್ಯುತ್ ಯೋಜನೆಗೆ ಅನುಮತಿ ಕೊಡುವುದಾದ್ರೆ ಮಹಾದಾಯಿ ಯೋಜನೆಗೆ ಅನುಮತಿ ಬೇಡಿಕೆ ಇಡುತ್ತೇವೆ ಎಂದರು.

ಮೊನ್ನೆ ಖಾಸಗಿ ಹೊಟೇಲ್ ನಲ್ಲಿ ನಡೆದ ಧಾರವಾಡ ಜಿಲ್ಲಾ ಬಿಜೆಪಿ ಮುಖಂಡರ ಸಭೆ ಕುರಿತು ಮಾತನಾಡಿದ ಅವರು, ಕೆಲ ಮುಖಂಡರನ್ನು ವಾಪಾಸ್ ಬಿಜೆಪಿಗೆ ಮರು ಸೇರ್ಪಡೆ ಕುರಿತು ಚರ್ಚೆ ಆಗಲಿದೆ. ನಾಳೆ ನಡೆಯುವ ಪಕ್ಷದ ಕಾರ್ಯಕ್ರಮದಲ್ಲಿ ೯೦ ಕ್ಕೂ ಹೆಚ್ಚು ಕಾರ್ಯಕರ್ತರು ಸೇರ್ಪಡೆಯಾಗಲಿದ್ದು, ಎಲ್ಲಾ ವಿವಾದಕ್ಕೂ ತೆರೆ ಬೀಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -spot_img

Most Popular

Recent Comments