ಹುಬ್ಬಳ್ಳಿ: ಪೊಲೀಸರ ಕಣ್ಣು ತಪ್ಪಿಸಿ ಸಾರ್ವಜನಿಕರಿಗೆ ಕಿರಿಕಿರಿ ಕೊಡುತ್ತಿದ್ದ ಯುವಕನನ್ನು ಕೇಶ್ವಾಪೂರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಸುಧಾಕರ ಎಂಬ ಯುವಕ ಕೇಶ್ವಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಕಳ್ಳತನ ಮಾಡಿ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ, 2022 ರಲ್ಲಿ ಆತನ ಮೇಲೆ ವಾರಂಟ ಆಗಿತ್ತು. ಇಂದು ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದಾಗ, ಆತನನ್ನು ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೆ ಪೊಲೀಸರು ಬಂದು ಆತನನ್ನು ವಶಕ್ಕೆ ಪಡೆದಿದ್ದಾರೆ.