Thursday, December 19, 2024
spot_img
Homeರಾಜಕೀಯಹಾವೇರಿಯಲ್ಲಿ ಈ ಬಾರಿ ಕಾಂಗ್ರೆಸ್ ಬಾವುಟ ಹಾರಿಸಿ : ಆನಂದಸ್ವಾಮಿ

ಹಾವೇರಿಯಲ್ಲಿ ಈ ಬಾರಿ ಕಾಂಗ್ರೆಸ್ ಬಾವುಟ ಹಾರಿಸಿ : ಆನಂದಸ್ವಾಮಿ

ಹಾವೇರಿ: ಲೋಕಸಭಾ ಚುನಾವಣೆಗೆ ರಣಕಹಳೆ ಊದಲಾಗಿದೆ. ಈ ದಿಸೆಯಲ್ಲಿ ಹಾವೇರಿ ಲೋಕಸಭಾ ಚುನಾವಣೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಘೋಷಣೆ ಬಳಿಕ ಆನಂದಸ್ವಾಮಿ ಗಡ್ಡದೇವರಮಠ ಅವರು ಕಾಲಿಗೆ ಚಕ್ರಕಟ್ಟಿಕೊಂಡಂತೆ ಕ್ಷೇತ್ರದಲ್ಲಿ ಸಂಚರಿಸುತ್ತಿದ್ದಾರೆ.

ಅದರಂತೆ ಇಂದು ಹಾನಗಲ್ ವಿಧಾನಸಭಾ ಮತಕ್ಷೇತ್ರದಲ್ಲಿ ಪ್ರಚಾರ ಕಾರ್ಯ ನಡೆಸಿದರು. ಈ ವೇಳೆ ಶಾಸಕರಾದ ಶ್ರೀನಿವಾಸ ಮಾನೆ ಅವರು ಆನಂದಸ್ವಾಮಿ ಗಡ್ಡದೇವರಮಠ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಸನ್ಮಾನಿಸಿದರು.

ಬಳಿಕ ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ತುರುಸು ಸಂಚಾರ ನಡೆಸಿದ ಆನಂದಸ್ವಾಮಿ ಹಿರೇಮಠ, ಪಕ್ಷದ ಮುಖಂಡರು, ಕಾರ್ಯಕರ್ತರ ಸಭೆ ನಡೆಸಿದರು. ಈ ವೇಳೆ ಹಾವೇರಿ ಲೋಕಸಭಾ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಬಾವುಟವನ್ನು ಹಾರಿಸಲು ಕರೆ ಕೊಟ್ಟರು.

ಈ ಸಂದರ್ಭದಲ್ಲಿ ಪಕ್ಷದ ಮುಂಚೂಣಿ ನಾಯಕರು, ಪದಾಧಿಕಾರಿಗಳು, ಕಾರ್ಯಕರ್ತರು ಇನ್ನಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -spot_img

Most Popular

Recent Comments