Monday, December 23, 2024
spot_img
Homeಕ್ರೈಂಹುಬ್ಬಳ್ಳಿ ಕಾರ್ಪೊರೇಟರ್ ಮಗಳ ಬರ್ಬರ ಹತ್ಯೆ ಕೇಸ್​ಗೆ ಬಿಗ್​ ಟ್ವಿಸ್ಟ್​.. ಆರೋಪಿ ಬಂಧನ

ಹುಬ್ಬಳ್ಳಿ ಕಾರ್ಪೊರೇಟರ್ ಮಗಳ ಬರ್ಬರ ಹತ್ಯೆ ಕೇಸ್​ಗೆ ಬಿಗ್​ ಟ್ವಿಸ್ಟ್​.. ಆರೋಪಿ ಬಂಧನ

•ಕಾಲೇಜ್​ ಕ್ಯಾಂಪಸ್‌ನಲ್ಲಿ ಚಾಕುನಿಂದ ಇರಿದು ಕೊಲೆ ಮಾಡಿದ್ದ ಆರೋಪಿ

•ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಹಿರೇಮಠ ಅವರ ಮಗಳು ನೇಹಾ

•ವಿದ್ಯಾರ್ಥಿನಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಫೈಜಲ್

ಹುಬ್ಬಳ್ಳಿ: ಹಾಡಹಗಲೇ ಪ್ರತಿಷ್ಠಿತ ಕಾಲೇಜು ಕ್ಯಾಂಪಸ್‌ನಲ್ಲಿ ಕಾರ್ಪೋರೇಟರ್ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಆರೋಪಿ ಫೈಜಲ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ಮಹಾನಗರ ಪಾಲಿಕೆಯ ಸದಸ್ಯ ನಿರಂಜನ ಹಿರೇಮಠ ಮಗಳನ್ನ ಕೊಲೆ ಮಾಡಿದ ಆರೋಪಿ ಆಕೆಯನ್ನು ಪ್ರೀತಿಸುತ್ತಿದ್ದನು ಎನ್ನುವುದು ವಿಚಾರಣೆಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ: BREAKING: ಕಾರ್ಪೊರೇಟರ್ ಮಗಳ ಭೀಕರ ಹತ್ಯೆ; ಹುಬ್ಬಳ್ಳಿಯ ಕಾಲೇಜು ಕ್ಯಾಂಪಸ್‌ನಲ್ಲಿ ಚಾಕು ಇರಿತ

ಬಿವಿಬಿ ಕಾಲೇಜು ಕ್ಯಾಂಪಸ್​ನಲ್ಲಿ ವಿದ್ಯಾರ್ಥಿನಿಗೆ ಚಾಕು ಇರಿದು ಸ್ಥಳದಿಂದ ಪರಾರಿಯಾಗಿದ್ದನು. ಈ ಸಂಬಂಧ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಸದ್ಯ ಹುಬ್ಬಳ್ಳಿಯ ವಿದ್ಯಾನಗರ ಠಾಣೆ‌ಯ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -spot_img

Most Popular

Recent Comments