ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿರುವ ಸವಾಯಿ ಗಂಧರ್ವ ಹಾಲ್ ನಲ್ಲಿ ಮೂರುಸಾವಿರ ಮಠದ ವೀರಶೈವ ಸಂಘಟನಾ ಸಮಿತಿ, ಧಾರವಾಡ ಜಿಲ್ಲಾ ವೀರಶೈವ ಲಿಂಗಾಯತ ಸಂಘಟನೆ, ವೀರಶೈವ ಲಿಂಗಾಯತ ಅಭಿವೃದ್ಧಿ ಸಂಘ, ಅಖಿಲ ಕರ್ನಾಟಕ ವೀರಶೈವ ಲಿಂಗಾಯತ ಸಂಸ್ಥೆ, ವೀರಶೈವ ಸಮಾಜ ಸಂಘಟನಾ ಸೇವಾ ಸಮಿತಿ ಇವರುಗಳ ಸಂಯುಕ್ತಾಶ್ರಯದಲ್ಲಿ ಇಂದು ಜರುಗಿದ ವೀರಶೈವ ಲಿಂಗಾಯತ ಎಲ್ಲ ಒಳಪಂಗಡಗಳ ಸಮಾಜದ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ, ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಮೂರುಸಾವಿರ ಮಠದ ಶ್ರೀ ಮನ್ ಮಹಾರಾಜ ನಿರಂಜನ ಜಗದ್ಗುರು ಡಾ. ಶ್ರೀ ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು.
ಈ ಸಂದರ್ಭದಲ್ಲಿ ರುದ್ರಾಕ್ಷಿ ಮಠದ ಶ್ರೀ ಮ.ನಿ.ಪ್ರ ಬಸವಲಿಂಗ ಮಹಾಸ್ವಾಮಿಗಳು, ಪಿ.ಸಿ ಜಾಬೀನ್ ಕಾಲೇಜಿನ ಪ್ರಾಚಾರ್ಯರಾದ ಡಾ. ಲಿಂಗರಾಜ ಧರ್ಮಪ್ಪ ಹೊರಕೇರಿ, ಶಾಸಕರಾದ ಶ್ರೀ ಮಹೇಶ ಟೆಂಗಿನಕಾಯಿ, ಬೆಳಗಾವಿ ಕೆಎಲ್ಇ ಸಂಸ್ಥೆಯ ನಿರ್ದೇಶಕರಾದ ಶ್ರೀ ಶಂಕರಣ್ಣ ಮುನವಳ್ಳಿ, ವೀರಶೈವ ಲಿಂಗಾಯತ ಒಳಪಂಗಡಗಳ ಒಕ್ಕೂಟದ ರಾಜ್ಯಾಧ್ಯಕ್ಷರಾದ ಶ್ರೀ ಡಾ. ಶರಣಪ್ಪ ಕೊಟಗಿ, ಹು -ಧಾ ಮಹಾನಗರ ಪಾಲಿಕೆಯ ಮಾಜಿ ಮಹಾಪೌರರು ಹಾಗೂ ಸದಸ್ಯರಾದ ಶ್ರೀ ವೀರಣ್ಣ ಸವಡಿ, ಪಾಲಿಕೆ ಸದಸ್ಯರಾದ ಶ್ರೀಮತಿ ಮೀನಾಕ್ಷಿ ಒಂಟಮುರಿ, ಪ್ರತಿಭಾ ಪುರಸ್ಕಾರ ಸಮೀತಿಯ ಸಂಚಾಲಕರಾದ ಶ್ರೀ ಮಲ್ಲಿಕಾರ್ಜುನ ಸಾವಕಾರ ಉಪಸ್ಥಿತರಿದ್ದರು.
#Hubballi