ಬೆಂಗಳೂರು: ಸ್ಯಾಂಡಲ್ವುಡ್ ನಟ ಅಭಿಷೇಕ್ ಅಂಬರೀಷ್ ಅವರು ತಂದೆಯಾಗುವ ಖುಷಿಯಲ್ಲಿದ್ದಾರೆ. ಈಗಾಗಲೇ ಕನ್ನಡ ಕಿರುತೆರೆ, ಹಿರಿತೆರೆ ಸೇರಿ ಹಲವು ಸೆಲೆಬ್ರಿಟಿಗಳು ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಅಂಬರೀಷ್ ಅವರ ಪತ್ನಿ ಅವಿವಾ ಕೂಡಾ ಗರ್ಭಿಣಿಯಾಗಿದ್ದಾರೆ.
ಕನ್ನಡ ಚಿತ್ರರಂಗದ ಜ್ಯೂನಿಯರ್ ರೆಬೆಲ್‌ಸ್ಟಾರ್ ಖ್ಯಾತಿಯ ಅಭಿಷೇಕ್ ಅಂಬರೀಶ್ ಅವರು ಅಪ್ಪನಾಗುವ ಖುಷಿಯಲ್ಲಿದ್ದಾರೆ. ಮದುವೆಯಾಗಿ ಒಂದು ವರ್ಷದಲ್ಲಿಯೇ ಮನೆಗೆ ಹೊಸ ಅತಿಥಿಯನ್ನು ಸ್ವಾಗತಿಸಲು ಸಿದ್ಧರಾಗಿದ್ದಾರೆ. ಇನ್ನು ಅವರ ಅಭಿಮಾನಿಗಳು ಮತ್ತೆ ರೆಬೆಲ್ ಸ್ಟಾರ್ ಅಂಬರೀಶ್ ಹುಟ್ಟಿಬರಲಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಹಲವು ವರ್ಷಗಳ ಕಾಲ ಪ್ರೀತಿಸುತ್ತಿದ್ದ ಅಭಿಷೇಕ್ ಅಂಬರೀಷ್ ಹಾಗೂ ಅವಿವಾ 2023ರ ಜೂನ್ 5ರಂದು ಅದ್ದೂರಿಯಾಗಿ ಮದುವೆಯಾಗಿದ್ದರು. ಇನ್ನು ವರ್ಷ ತುಂಬುವಷ್ಟರಲ್ಲಿ ಅಭಿಷೇಕ್ ಅಂಬರೀಶ್ ಪತ್ನಿ ಅವಿವಾ ಗರ್ಭಿಣಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಅಭಿಷೇಕ್ ಕಿಕ್ ಬಾಕ್ಸಿಂಗ್ ಕಲಿಯಲು ವಿದೇಶಕ್ಕೆ ಹೋಗಿದ್ದು, ಅಭಿಷೇಕ್ ಅಂಬರೀಷ್ ಅವರು ನಾಳೆ ಬೆಂಗಳೂರಿಗೆ ವಾಪಸ್ಸಾಗಲಿದ್ದು ಇದೇ ವಾರ ಅದ್ದೂರಿಯಾಗಿ ಅಂಬಿ ನಿವಾಸದಲ್ಲಿ ಸೀಮಂತ ಕಾರ್ಯ ನೇರವೇರಲಿದೆ. ಅಂತೂ ಈಗ ಅಂಬಿ ಮನೆಯಲ್ಲಿ ಪುಟ್ಟ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಮನೆ ಮಂದಿ.