ಕೊಪ್ಪಳ: ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಬೇಕು ಅನ್ನೋ ಕಾರಣಕ್ಕೆ ಸರ್ಕಾರ ನಿತ್ಯ ಉಪಾಹಾರದೊಂದಿಗೆ ಮೊಟ್ಟೆಯನ್ನು ನೀಡುತ್ತಿದೆ. ಆದ್ರೆ ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲೂ ವಂಚನೆ ಎಸಗಿರುವ ಆರೋಪ ಕೊಪ್ಪಳ ಜಿಲ್ಲೆಯಲ್ಲಿ ಕೇಳಿಬಂದಿದೆ.
ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯನ್ನು ವಾಪಸ್ ಕಸಿದುಕೊಂಡು ವಂಚನೆ ಎಸಗುತ್ತಿದ್ದ ಆರೋಪದ ಮೇಲೆ ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮಿ, ಸಹಾಯಕಿ ಶೈನಜಾಬೇಗಂ ಅವರನ್ನ ಅಮಾನತು ಮಾಡಲಾಗಿದೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ ಗ್ರಾಮದ 2ನೇ ಅಂಗನವಾಡಿ ಕೇಂದ್ರದಲ್ಲಿ ಘಟನೆ ನಡೆದಿದ್ದು, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಇಬ್ಬರನ್ನೂ ಅಮಾನತುಗೊಳಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಆದೇಶ ಹೊರಡಿಸಿದ್ದಾರೆ
ವಿಡಿಯೋ ವೈರಲ್:
ಕೊಪ್ಪಳ ಜಿಲ್ಲೆಯಲ್ಲಿ ಅಂಗನವಾಡಿ ಮಕ್ಕಳಿಗೆ ವಿತರಿಸುವ ಮೊಟ್ಟೆಯಲ್ಲಿ ಗೋಲ್ಮಾಲ್ ನಡೆದಿದೆ. ಕಾರ್ಯಕರ್ತೆಯರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಲೆತಗ್ಗಿಸುವಂತ ಕೆಲಸ ಮಾಡಿದ್ದಾರೆ. ಮಕ್ಕಳಿಗೆ ಮೊಟ್ಟೆ ಕೊಟ್ಟು ಫೋಟೋ ಕ್ಲಿಕ್ಕಿಸಿ, ಮಕ್ಕಳು ಬಾಯಿಗಿಡುವ ಮುನ್ನವೇ ಮೊಟ್ಟೆ ಕಸಿದುಕೊಂಡಿದ್ದಾರೆ. ಈ ಅಮಾನವೀಯ ಘಟನೆ ವೀಡಿಯೋದಲ್ಲಿ ಸೆರೆಯಾಗಿದೆ. ಈ ಕೃತ್ಯದ ವಿಡಿಯೋ ವೈರಲ್ ಆಗುತ್ತಿದ್ದಂತೆ ಕಾರ್ಯಕರ್ತೆ, ಸಹಾಯಕಿಯನ್ನು ಅಮಾನತು ಮಾಡಲಾಗಿದೆ. ಇನ್ನು ಸ್ಥಳೀಯರು ಇಬ್ಬರನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ.
ಚಿನ್ನ ಪ್ರೀಯರಿಗೆ ಶಾಕ್! 100 ಗ್ರಾಂ ಚಿನ್ನದ ದರದಲ್ಲಿ ಮತ್ತೆ 2 ಸಾವಿರ ರೂ ಏರಿಕೆ