ಹುಬ್ಬಳ್ಳಿ: ಬಿಜೆಪಿ ಮತ್ತು ಜೆಡಿಎಸ್ ಮುಡಾ ಹಗರಣದ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ನಡೆಸುತ್ತಿರುವ ‘ಮೈಸೂರು ಚಲೋ’ ಪಾದಯಾತ್ರೆ ಅಂತಿಮ ದಿನಕ್ಕೆ ಕಾಲಿಟ್ಟಿದೆ. ಸದ್ಯ ಮಂಡ್ಯ ಜಿಲ್ಲೆಯಲ್ಲಿ ಪಾದಯಾತ್ರೆ ನಡೆಯುತ್ತಿದೆ.
“ಮೈಸೂರು ಚಲೋ” ದಿನ ದುರಾಡಳಿತದ ಹಗರಣಗಳ ಸರ್ಕಾರದ ವಿರುದ್ಧದ ಸತತ 7 ನೇ ದಿನದ ಪಾದಯಾತ್ರೆ ಯಲ್ಲಿ ಧಾರವಾಡ ಜಿಲ್ಲೆಯ ಕುಂದಗೋಳ ಮತಕ್ಷೇತ್ರದ ಶಾಸಕ ಎಮ್.ಆರ್.ಪಾಟೀಲ್ ಸೇರಿದಂತೆ ಜಿಲ್ಲೆಯ ಎಲ್ಲ ನಾಯಕರು ಒಗ್ಗಟ್ಟಿನಿಂದ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು.
7ನೇ ದಿನದ ಮೈಸೂರು ಚಲೋ ಪಾದಯಾತ್ರೆ ಶ್ರೀರಂಗಪಟ್ಟಣದಿಂದ ನಡೆಯಿತು. ಇದೇ ವೇಳೆ ಬೃಹತ್ ಪಾದಯಾತ್ರೆಯ ಕಾರ್ಯಕ್ರಮನ್ನುದ್ದೇಶಿಸಿ ಮಾತನಾಡಿದ ಶಾಸಕರಾದ ಎಮ್.ಆರ್.ಪಾಟೀಲ್, ಶೈಲೇಂದ್ರ ಬೆಲ್ದಾಳೆ ಅವರು ದಲಿತರು, ಪರಿಶಿಷ್ಟ ಜಾತಿ, ಪಂಗಡದ ಜನರು, ಬಡವರು, ನಿರ್ಗತಿಕರ ಪರವಾಗಿ ಧ್ವನಿ ಎತ್ತಿರುವ ವಿರೋಧ ಪಕ್ಷದ ಪ್ರಶ್ನೆಗಳಿಗೆ ಸದನದಲ್ಲೂ ಉತ್ತರ ಕೊಡದೆ, ಹೊರಗೂ ಉತ್ತರ ನೀಡದೆ ವಿರೋಧ ಪಕ್ಷಗಳನ್ನೇ ಪ್ರಶ್ನಿಸುವ ಮೂಲಕ ಹಗರಣಗಳನ್ನು ಮುಚ್ಚುವ ಪ್ರಯತ್ನ ಮಾಡುತ್ತಿದ್ದಾರೆ. ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದನ್ನು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾಲತೇಶ್ ಶಾಗೋಟಿ ರವಿಗೌಡ ಪಾಟೀಲ್ ಉಮೇಶ್ ಕುಸುಗಲ್ ಪ್ರತಾಪ್ ಪಾಟೀಲ್ ಸೇರಿದಂತೆ ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಮೊಳಗಿಸುತ್ತಾ ಹೆಜ್ಜೆ ಹಾಕಿದರು.
ಪಕ್ಕದ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಬಾಲಕಿ ದುರಂತ ಸಾವು: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಸಕ ಎಂ ಆರ್ ಪಾಟೀಲ್