ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಎರಡು ಪ್ರತ್ಯೇಕ ಪೋಕ್ಸೋ ಪ್ರಕರಣಗಳು ದಾಖಲಾಗಿವೆ.
ಕಸಬಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 15 ವರ್ಷದ ಬಾಲಕನ ಮೇಲೆ ಅತ್ಯಾಚಾರ. 24 ವರ್ಷದ ಯುವಕನೊಬ್ಬ ಅತ್ಯಾಚಾರ ಮಾಡಿದ್ದಾನೆ. ಮಾಸುಮ್ ಹುಲಮನಿ ಎಂಬುವ ಯವಕನಿಂದ ಕೃತ್ಯ ಎಸಗಿದ್ದಾನೆ. ಆರೋಪಿ ಗಾರೆ ಮತ್ತು ಪೇಂಟಿಂಗ್ ಕೆಲಸ ಮಾಡುತ್ತಿದ್ದ.
ಮೊಬೈಲ್ ಕೂಡಿಸುವದಾಗಿ ಕರೆದುಕೊಂಡು ಹೋಗಿ ಬಾಲಕನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಪ್ರಕರಣ ದಾಖಲಾಗುತ್ತಿದಂತೆ ಆರೋಪಿ ಮಾಸುಮ್ ಹುಲಮನಿಯನ್ನು ಕಸಬಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಮತ್ತೊಂದೆಡೆ ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಏಳು ವರ್ಷದ ಅಪ್ರಾಪ್ತ ಬಾಲಕಿ ಮೇಲೆ 55 ವರ್ಷದ ವ್ಯಕ್ತಿಯಿಂದ ಅತ್ಯಾಚಾರ ಎಸಗಿದ್ದಾನೆ. ಬಾಲಕಿಯನ್ನು ಆಟವಾಡಿಸುವ ನೆಪದಲ್ಲಿ ಆರೋಪಿ ನೂರ ಅಹಮ್ಮದ್ ಎನ್ನುವ ವ್ಯಕ್ತಿ ಈ ಕೃತ್ಯ ಎಸಗಿದ್ದಾನೆ. ಕೃತ್ಯವೆಸಗಿದ ವ್ಯಕ್ತಿಯನ್ನು ಅಶೋಕ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.